ಅಭಿಪ್ರಾಯ / ಸಲಹೆಗಳು

ಚೈತನ್ಯ ಸಹಾಯಧನ ಯೋಜನೆ

1.    ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿದವರಾಗಿರಬೇಕು (ಒಕ್ಕಲಿಗ ಮತ್ತು ಅದರ ಉಪ ಜಾತಿಗಳು, ವೀರ ಶೈವ ಲಿಂಗಾಯುತ ಅದರ ಉಪ ಜಾತಿಗಳು, ಮರಾಠ ಮತ್ತು ಅದರ ಉಪ ಜಾತಿಗಳು, ಕಾಡುಗೊಲ್ಲ, ಹಟ್ಟಿಗೊಲ್ಲ ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳು, ಸವಿತಾ ಮತ್ತು ಅದರ ಉಪ ಜಾತಿಗಳು ಮಡಿವಾಳ ಮತ್ತು ಅದರ ಉಪ ಜಾತಿ ಈ ಜಾತಿಯನ್ನು ಹೊರತುಪಡಿಸಿ) ಹಾಗೂ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000/- ಪಟ್ಟಣ ಪ್ರದೇಶದವರಿಗೆ ರೂ.55,000/-ಗಳ ಒಳಗಿರಬೇಕು.
2.    ಬ್ಯಾಂಕ್‍ಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ.
3.    ಉದ್ದೇಶ: ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸೇವಾವಲಯ ಮತ್ತು ಸಾರಿಗೆ ವಲಯದ ಉದ್ದೇಶಗಳು.
4.   ಸರ್ಕಾರದ ಆದೇಶ ಸಂಖ್ಯೆ: ಬಿಸಿಡಬ್ಲ್ಯೂ 739 ಬಿಎಂಎಸ್ 2018, ಬೆಂಗಳೂರು ದಿನಾಂಕ:23/10/2018ರನ್ವಯ ಈ ಯೋಜನೆಯಲ್ಲಿ ಘಟಕ ವೆಚ್ಚ ರೂ.25,000/-ಗಳಿಂದ ರೂ.5.00ಲಕ್ಷಗಳ ಘಟಕಗಳಿಗೆ ಶೇ.20ರಷ್ಟು ಗರಿಷ್ಟ ರೂ.25,000/-ಗಳ ಸಹಾಯಧನ ಮಾತ್ರ ನಿಗಮದಿಂದ ಮಂಜೂರು ಮಾಡಲಾಗುವುದು.  ಉಳಿಕೆ ಮೊತ್ತ ಬ್ಯಾಂಕ್ ಪಾಲಿನ ಸಾಲವಾಗಿರುತ್ತದೆ.
5.   ಬ್ಯಾಂಕ್ ಪಾಲಿನ ಸಾಲಕ್ಕೆ ಬ್ಯಾಂಕ್‍ಗಳಲ್ಲಿ ವಿಧಿಸುವ ಚಾಲ್ತಿಯಲ್ಲಿರುವ ಬಡ್ಡಿದರ.
6.   ಆಯಾ ಬ್ಯಾಂಕ್ ಶಾಖೆಗೆ ನಿಗದಿಪಡಿಸಿದ ಗುರಿಗೆ 1:1.25 ಅನುಪಾತದಲ್ಲಿ ಅರ್ಜಿ ಶಿಫಾರಸ್ಸು ಮಾಡುವುದು.
7.  ಸರ್ಕಾರದ ಆದೇಶ ಸಂಖ್ಯೆ: ಹಿಂವಕ 31 ಸಮನ್ವಯ 2013, ಬೆಂಗಳೂರು ದಿನಾಂಕ:25/02/2013ರನ್ವಯ ಈ ಯೋಜನೆಯಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಇವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
8. ಸಹಾಯಧನ ಮಂಜೂರಾತಿಗೆ ಸಲ್ಲಿಸುವ ಪ್ರಸ್ತಾವನೆಯೊಂದಿಗೆ ಬ್ಯಾಂಕ್ ಶಾಖೆಯಿಂದ ನೀಡಿರುವ ಮಂಜೂರಾತಿ ಪತ್ರ/ಸಹಾಯಧನ ಕ್ಲೈಂ ಪತ್ರದ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸುವುದು.

ಇತ್ತೀಚಿನ ನವೀಕರಣ​ : 06-07-2022 01:01 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080