ಅಭಿಪ್ರಾಯ / ಸಲಹೆಗಳು

ಗಂಗಾಕಲ್ಯಾಣ ನೀರಾವರಿ ಯೋಜನೆ

  1. ಉದ್ದೇಶ: ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.
  2. ಅರ್ಹತೆಹಿಂದುಳಿದ ವರ್ಗಗಳ ಪ್ರವರ್ಗ-1, 2, 3 ಮತ್ತು 3ಬಿ ಸೇರಿದವರಾಗಿದ್ದುಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. (ಒಕ್ಕಲಿಗ ಮತ್ತು ಅದರ ಉಪ ಜಾತಿಗಳು, ವೀರ ಶೈವ ಲಿಂಗಾಯುತ ಅದರ ಉಪ ಜಾತಿಗಳು, ಮರಾಠ ಮತ್ತು ಅದರ ಉಪ ಜಾತಿಗಳು, ಕಾಡುಗೊಲ್ಲ, ಹಟ್ಟಿಗೊಲ್ಲ ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳು, ಸವಿತಾ ಮತ್ತು ಅದರ ಉಪ ಜಾತಿಗಳು ಮಡಿವಾಳ ಮತ್ತು ಅದರ ಉಪ ಜಾತಿ ಈ ಜಾತಿಯನ್ನು ಹೊರತುಪಡಿಸಿ) 
  3. ಸೌಲಭ್ಯ
  4. ವೈಯುಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ ಯೋಜನೆಯಲ್ಲಿ ಉಡುಪಿದಕ್ಷಿಣ ಕನ್ನಡಕೊಡಗುಉತ್ತರ ಕನ್ನಡಚಿಕ್ಕಮಗಳೂರುಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕುಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು
  5. ಘಟಕವೆಚ್ಚರೂ.2.50ಲಕ್ಷಗಳುರೂ.2.00ಲಕ್ಷಗಳ ಸಹಾಯಧನ(ಸಬ್ಸಿಡಿಹಾಗೂ ವಾರ್ಷಿಕ ಶೇ.4 ಬಡ್ಡಿದರದಲ್ಲಿ ರೂ.50,000/-ಗಳ ಸಾಲ.  ರೂ.2.00ಲಕ್ಷಗಳ ಸಹಾಯಧನದಲ್ಲಿ ಕೊಳವೆ ಬಾವಿ ಕೊರೆಯುವ ವೆಚ್ಚಪಂಪ್ಸೆಟ್ ಅಳವಡಿಕೆ ಹಾಗೂ ಪೂರಕ ಸಾಮಗ್ರಿಗಳ ಸರಬರಾಜಿಗೆ ರೂ.1.50ಲಕ್ಷಗಳ ವೆಚ್ಚ ಭರಿಸಲಾಗುವುದು
  6. ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್.ಆರ್ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ಧೀಕರಣ ವೆಚ್ಚವಾಗಿಪ್ರತಿ ಕೊಳವೆ ಬಾವಿಗಳಿಗೆ ರೂ.50000/-ಗಳಂತೆ ಪಾವತಿಸಲಾಗುವುದು
  • ಬೆಂಗಳೂರು ಉತ್ತರಬೆಂಗಳೂರು ದಕ್ಷಿಣಬೆಂಗಳೂರು ಗ್ರಾರಾಮನಗರಕೋಲಾರಚಿಕ್ಕಬಳ್ಳಾಪುರತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.4.00ಲಕ್ಷಗಳುಇದರಲ್ಲಿ ರೂ.3.50ಲಕ್ಷಗಳ ಸಹಾಯಧನ ಹಾಗೂ ರೂ.50000/-ಗಳ ಸಾಲವಾಗಿರುತ್ತದೆ.
  1. ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆಪ್ರವರ್ಗ-1, 2, 3 & 3ಬಿಗೆ ಸೇರಿದ ಕನಿಷ್ಠ 3 ಜನ ಸಣ್ಣ ಮತ್ತು ಅತಿಸಣ್ಣ ರೈತರು ಹೊಂದಿರುವ 8 ಎಕರೆ ಮತ್ತು ಅದಕ್ಕಿಂತ ಹೆಚ್ಚಿನ ಜಮೀನಿಗೆ ಸಾಮೂಹಿಕವಾಗಿ ನೀರಾವರಿ ಸೌಲಭ್ಯ
  2. ಘಟಕ ವೆಚ್ಚ: 8-15 ಎಕರೆ ಜಮೀನಿಗೆ ರೂ.4.00ಲಕ್ಷಗಳ ವೆಚ್ಚದಲ್ಲಿ 2 ಕೊಳವೆಬಾವಿ ಹಾಗೂ 15 ಎಕರೆಗಿಂತ ಹೆಚ್ಚು ಜಮೀನು ಒಳಪಡುವ ಘಟಕಗಳಿಗೆ ನಿಗದಿತ ಘಟಕವೆಚ್ಚ ರೂ.6.00ಲಕ್ಷಗಳ ವೆಚ್ಚದಲ್ಲಿ 3 ಕೊಳವೆಬಾವಿಗಳನ್ನು ಕೊರೆಯಿಸಿ ಪಂಪ್ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡುವುದು ಹಾಗೂ ವಿದ್ಯುದ್ದೀಕರಣಕ್ಕೆ ಠೇವಣಿ ಪಾವತಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದುಇದು ಪೂರ್ಣ ಅನುದಾನವಾಗಿರುತ್ತದೆ.
  3. ತೆರೆದಬಾವಿವೈಯುಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.
  • ಸಾಮೂಹಿಕ ಏತ ನೀರಾವರಿ ಯೋಜನೆಭೂಮಟ್ಟದಲ್ಲಿ ಶಾಶ್ವತವಾಗಿ ದೊರೆಯುವ ಜಲಸಂಪನ್ಮೂಲಗಳಾದ ನದಿಕೆರೆಹಳ್ಳ ಇವುಗಳಿಗೆ ಮೋಟಾರ್ ಅಳವಡಿಸಿ ಪೈಪ್ಲೈನ್ ಮೂಲಕ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು
  1. ಘಟಕವೆಚ್ಚಸಾಮೂಹಿಕ ನೀರಾವರಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಸೌಲಭ್ಯ ಒದಗಿಸುವುದು

             ಕಾರ್ಯಕ್ರಮಕ್ಕೆ ಆಯಾ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಿದ ಆರ್ಥಿಕ ಗುರಿಯನ್ವಯ ಮೀಸಲಾತಿ ಅನುಪಾತ  ಪ್ರವರ್ಗ-1 ಮತ್ತು 2ಎಗೆ 70% ಪ್ರವರ್ಗ-3 ಮತ್ತು 3ಬಿಗೆ 30%ರಂತೆ ವೈಯಕ್ತಿಕ/ಸಾಮೂಹಿಕ ನೀರಾವರಿ ಘಟಕಗಳನ್ನು ಆಯ್ಕೆ ಮಾಡಿ ಸೌಲಭ್ಯ ಒದಗಿಸಬೇಕು

  1. ಮರುಪಾವತಿ ಅವಧಿಸಾಲದ ಮರುಪಾವತಿ ಅವಧಿ 3 ವರ್ಷಗಳು

      5.  ಕರ್ನಾಟಕ ಅಂತರ್ಜಲ ಅಧಿನಿಯಮದನ್ವಯ  ಕೆಳಕಂಡ 35 ತಾಲ್ಲೂಕುಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಯುವ ಮುನ್ನ ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯತಕ್ಕದ್ದುಅನುಮತಿ ಪಡೆದಂತಹ ಫಲಾನುಭವಿಗಳ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಯಲು ಕ್ರಮವಹಿಸತಕ್ಕದ್ದು.

 

ಕ್ರ ಸಂ

ಜಿಲ್ಲೆಯ ಹೆಸರು

ಕ್ರ ಸಂ

ತಾಲ್ಲೂಕುಗಳ ಹೆಸರು

1

ಬೆಂಗಳೂರು ನಗರ

1

ಆನೇಕಲ್

   

2

ಬೆಂಗಳೂರು ಪೂರ್ವ

   

3

ಬೆಂಗಳೂರು ಉತ್ತರ

   

4

ಬೆಂಗಳೂರು ದಕ್ಷಿಣ

2

ಬೆಂಗಳೂರ ಗ್ರಾಮಾಂತರ

5

ದೇವನಹಳ್ಳಿ

   

6

ದೊಡ್ಡಬಳ್ಳಾಪುರ

   

7

ಹೊಸಕೋಟೆ

   

8

ನೆಲಮಂಗಲ

3

ರಾಮನಗರ

9

ಕನಕಪುರ

   

10

ರಾಮನಗರ

4

ತುಮಕೂರು

11

ಚಿಕ್ಕನಾಯಕನಹಳ್ಳಿ

   

12

ಕೊರಟಗೆರೆ

   

13

ಮಧುಗಿರಿ

5

ಚಿತ್ರದುರ್ಗ

14

ಚಿತ್ರದುರ್ಗ

   

15

ಹೊಳಲ್ಕೆರೆ

6

ಕೋಲಾರ

16

ಬಂಗಾರಪೇಟೆ

   

17

ಕೋಲಾರ

   

18

ಮಾಲೂರು

   

19

ಮುಳಬಾಗಿಲು

   

20

ಶ್ರೀನಿವಾಸಪುರ

7

ಚಿಕ್ಕಬಳ್ಳಾಪುರ

21

ಚಿಕ್ಕಬಳ್ಳಾಪುರ

   

22

ಚಿಂತಾಮಣಿ

   

23

ಗೌರಿಬಿದನೂರು

   

24

ಗುಡಿಬಂಡೆ

   

25

ಶಿಡ್ಲಘಟ್ಟ

8

ದಾವಣಗೆರೆ

26

ಜಗಳೂರು

9

ಬೆಳಗಾವಿ

27

ಅಥಣಿ

   

28

ಬೈಲಹೊಂಗಲ

   

29

ರಾಮದುರ್ಗ

   

30

ಸವದತ್ತಿ

10

ಬಾಗಲಕೋಟೆ

31

ಬಾದಾಮಿ

   

29

ರಾಮದುರ್ಗ

   

30

ಸವದತ್ತಿ

ಇತ್ತೀಚಿನ ನವೀಕರಣ​ : 06-07-2022 12:57 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080